ಕೊರೊನಾ ರೋಗಿಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ ಆರೋಪ.. ಸಚಿವರಿಂದ ಉನ್ನತ ಅಧಿಕಾರಿಗಳ ಜೊತೆಗೆ ಚರ್ಚೆ

ವಾಹಿನಿ ಸುದ್ದಿ

ಡಾ.ಸುಧಾಕರ್‌ ಕೋವಿಡ್ ಸಂಬಂಧ ರಾಜ್ಯದಲ್ಲಿ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡು ಕೋವಿಡ್ ನಿಂದ ರಾಜ್ಯವನ್ನ ರಕ್ಷಿಸಲು‌ಪ್ರಯತ್ನಿಸುತ್ತಿದ್ದಾರೆ.. ಈ ನಡುವೆ ಕೊರೊನಾ ರೋಗಿಗಳಿಗೆ ಸರಿಯಾದ ಮೂಲಭೂತ ಸೌಕರ್ಯಗಳು ಹಾಗು ಚಿಕಿತ್ಸೆಯಲ್ಲಿ ನಿರ್ಲಕ್ಷ ಕಂಡು ಬಂದಿರುವ ವರದಿಗಳು ಬಂದಿದೆ.. ಈ ಸಂಬಂಧ ಡಾ.ಕೆ.ಸುಧಾಕರ್‌ ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದು ಈ ಬಗ್ಗೆ ಮಾಹಿತಿ ನೀಡಿದ್ದಾರೆ..

ಕಳೆದ 3 ತಿಂಗಳಿನಿಂದ ನಾನು ಅತ್ಯಂತ ಸಕ್ರಿಯವಾಗಿ ಕೋವಿಡ್ ವಿರುದ್ಧದ ಸಮರದಲ್ಲಿ ತೊಡಗಿಕೊಂಡಿದ್ದೇನೆ. ನಿಮ್ಮೆಲ್ಲರ ಸಹಕಾರದಿಂದ ನಮ್ಮ ರಾಜ್ಯದಲ್ಲಿ ಸ್ವಲ್ಪ ಭಿನ್ನವಾಗಿ ಕೊರೋನ ನಿಯಂತ್ರಿಸಲು ಸಾಧ್ಯವಾಗಿದೆ. ದುರದೃಷ್ಟವಶಾತ್ ನನ್ನ ತಂದೆ, ಪತ್ನಿ ಹಾಗೂ 10 ವರ್ಷದ ನನ್ನ ಮಗಳಿಗೆ ಸೋಂಕು ತಗುಲಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾನು ಕ್ವಾರಂಟೈನ್ ನಲ್ಲಿರುವ ಕಾರಣ ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದೇನೆ. ನಗರದ ಕೋವಿಡ್ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ಮತ್ತು ಸೌಲಭ್ಯಗಳು ದೊರಕುತ್ತಿಲ್ಲ ಎನ್ನುವ ಸುದ್ದಿಯನ್ನು ಮಾಧ್ಯಮಗಳಲ್ಲಿ ಗಮನಿಸಿದೆ.

ಅದಕ್ಕಾಗಿ ಇಂದು ಹಿರಿಯ ಅಧಿಕಾರಿಗಳು ಮತ್ತು ವಿಕ್ಟೋರಿಯಾ, ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ, ಬೌರಿಂಗ್ ಮೊದಲಾದ ಕೋವಿಡ್ ಆಸ್ಪತ್ರೆಗಳ ನಿರ್ದೇಶಕರ ಜೊತೆಗೆ ನನ್ನ ಮನೆಯಿಂದಲೇ ವಿಡಿಯೋ ಸಂವಾದ ನಡೆಸಿದೆ. ರೋಗಿಗಳ ದಾಖಲಾತಿ, ಆಹಾರ, ಸ್ವಚ್ಛತೆ, ಚಿಕಿತ್ಸೆಗಳಲ್ಲಿ ಲೋಪಗಳ ದೂರು ಬಂದಲ್ಲಿ ನಿರ್ದೇಶಕರುಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ಸ್ಥಳಾಂತರಿಸಬೇಕು, ಹಿರಿಯ ವೈದ್ಯರು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡದ ದೂರುಗಳು ಬಂದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ

ನನ್ನ ತಂದೆ, ಪತ್ನಿ ಮತ್ತು ಪುತ್ರಿಗೆ ಗುಣಮುಖರಾಗುವಂತೆ ಹಾರೈಸಿರುವ ಎಲ್ಲರಿಗೂ ನಾನು ಚಿರಋಣಿ, ನಿಮ್ಮ ಹಾರೈಕೆಯೇ ನಮ್ಮ ಶ್ರೀರಕ್ಷೆ.